
ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.
ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.
2023-23 ನೇ ಸಾಲಿನಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಪ್ರೊತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
2023 ನೇ ಸಾಲಿನಲ್ಲಿ ಪಿಯುಸಿ, ಡಿಗ್ರಿ, ಇತರೆ ಕೋರ್ಸ್ ಗಳಲ್ಲಿ 60% ಗಿಂತ ಹೆಚ್ಚಿನ ಅಂಕಗಳನ್ನು ಗಳಿಸಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಯಾರಿಗೆ ಎಷ್ಟು ಪ್ರೋತ್ಸಾಹ ಧನ ಸಿಗಲಿದೆ:
ಪಿಯುಸಿ/ಡಿಪ್ಲೊಮಾ/ಐಟಿಐ - 20000/-
ಡಿಗ್ರಿ - 25000/-
PG - 30000/-
ಇತರೆ ಕೋರ್ಸ್ - 35000/-
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
ಎಸ್ ಎಸ್ ಎಲ್ ಸಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆ ಪ್ರತಿ, ವಿದ್ಯಾರ್ಥಿ ಪೋಟೊ, ಇಮೇಲ್ ಐಡಿ.
ಅರ್ಜಿ ಸಲ್ಲಿಸುವುದು ಹೇಗೆ?
ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್ ಲೈನ್ ಸೈಬರ್ : 7411090913 ಈ ಮೊಬೈಲ್ ಸಂಖ್ಯೆಗೆ ಡಾಕ್ಯುಮೆಂಟ್ಸ್ ಗಳನ್ನು ಕಳುಹಿಸಿ ಅರ್ಜಿ ಸಲ್ಲಿಸಿ, ಅಂತಿಮವಾಗಿ ಸಲ್ಲಿಕೆಯಾದ ಪ್ರತಿಯನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಆಗಸ್ಟ್, 2023. ಆಗಿದ್ದು, ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು?
ಅರ್ಜಿ ಸಲ್ಲಿಸಿದ ನಂತರ, ಅರ್ಜಿ ಸಲ್ಲಿಸಲು ನೀಡಿರುವ ಎಲ್ಲಾ ದಾಖಲೆಗಳ ಮೇಲೆ ನಿಮ್ಮ ಕಾಲೇಜಿನ ಪ್ರಾಂಶುಪಾಲರ ಸಹಿ ಮಾಡಿಸಿ ಅದನ್ನು ನಿಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕು. ನೀಡಿದ ನಂತರ ಸಮಾಜ ಕಲ್ಯಾಣ ಇಲಾಖೆ ವೆಬ್ ಸೈಟ್ ಮೂಲಕ ಅರ್ಜಿಯ ಸ್ಥಿತಿಯನ್ನು ತಿಳಿಯಬಹುದು.
ಹೆಚ್ಚಿನ ಮಾಹಿತಿಯನ್ನು ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. https://youtu.be/l6DgypKCcXI